Breaking
Fri. Aug 14th, 2026

ದೇಶದ್ರೋಹಿ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ: ಸಚಿವ ಜಮೀರ್ ಅಹ್ಮದ್ ವಿರುದ್ಧ ಆರ್.ಅಶೋಕ್ ಆಕ್ರೋಶ

ಬೆಂಗಳೂರು( ಅ.14): ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಸಚಿವ ಜಮೀರ್ ಅಹ್ಮದ್ ರವರು ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣಕ್ಕೆ ವಿನಾಯಿತಿ ಕೇಳಿ ಸಿಎಂ ಡಿ.ಕೆ.ಶಿವ ಕುಮಾರ್ ಅವರಿಗೆ ಪತ್ರ ಬರೆದಿರುವುದು, ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ.

ಇದೇ ವಿಚಾರವಾಗಿ ವಿಪಕ್ಷ ಬಿಜೆಪಿ ನಾಯಕರು ಇಂದು ವಿಧಾನಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಕಿಡಿಕಾರಿದ್ದಾರೆ. “ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣಕ್ಕೆ ಸಮಯ ಇಲ್ಲ ಎಂದು ಹೇಳುವ ಮೂಲಕ ಜಮೀರ್ ಅಹಮದ್ ದೇಶದ್ರೋಹ ಎಸಗಿದ್ದಾರೆ ಅನ್ನೋದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ?” ಎಂದು ವಿಪಕ್ಷ ನಾಯಕರ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿಜವಾದ ಬಣ್ಣ ಮತ್ತೊಮ್ಮೆ ನಡುರಸ್ತೆಯಲ್ಲಿ ಬಯಲಾಗಿದೆ. ವಿಜಯನಗರ ಜಿಲ್ಲೆಯಲ್ಲಿ ಆಗಸ್ಟ್ 15ರ ಪವಿತ್ರ ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರ ಧ್ವಜಾರೋಹಣ ಮಾಡಲು ನನಗೆ “ಸಮಯವಿಲ್ಲ”, ಹಾಗಾಗಿ ಅದರಿಂದ ವಿನಾಯಿತಿ ನೀಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಮುಖ್ಯಮಂತ್ರಿಗಳಿಗೆ ಅಧಿಕೃತವಾಗಿ ಪತ್ರ ಬರೆದಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆ, ಉಪಚುನಾವಣೆ ಮತ್ತು ಪಕ್ಷದ ಸಂಘಟನೆಯಲ್ಲಿ ಬ್ಯುಸಿಯಾಗಿದ್ದೇನೆ ಎಂಬುದು ಇವರು ನೀಡಿರುವ ಲಜ್ಜೆಗೆಟ್ಟ ನೆಪ ಎಂದು ಕಿಡಿ ಕಾರಿದ್ದಾರೆ.

Related Post

Leave a Reply

Your email address will not be published. Required fields are marked *