ಕೊಪ್ಪಳ (ಜುಲೈ.22): ಇತ್ತೀಚೆಗೆ ಕೊಲೆ ಮತ್ತು ಶವಗಳ ಪತ್ತೆ ಪ್ರಕರಣಗಳಿಂದ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಧರ್ಮಸ್ಥಳದಲ್ಲಿ ಇದೀಗ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜುಮಲಾಪೂರ ಗ್ರಾಮದ ಸರಕಾರಿ ಶಾಲೆಯ ಶಿಕ್ಷಕ ಬಸವರಾಜ್ ಪೊಲೀಸ್ ಪಾಟೀಲ್ (35) ಅವರು ಧರ್ಮಸ್ಥಳದಲ್ಲಿ ಕೊಳೆತ ಶವವಾಗಿ ಪತ್ತೆಯಾಗಿದ್ದಾರೆ.ಬಸವರಾಜ್ ಅವರು ಮಂಗಳವಾರದಿಂದಲೇ ಶಾಲೆಯಿಂದ ಕಾಣೆಯಾಗಿದ್ದರು. ಈ ವಿಚಾರವಾಗಿ ಶಾಲೆಯ ಆಡಳಿತ ಮಂಡಳಿಯಲ್ಲಿ ಆತಂಕಕ್ಕೆ ಗುರಿಯಾಗಿ ಊರು ಸುತ್ತಮುತ್ತ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ, ಇದರಿಂದ ಕುಟುಂಬಸ್ಥರು ಆತಂಕಗೊಂಡಿದ್ದರು. ಕಳೆದ ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿದ್ದು, ಅದರ ಮರುದಿನವೇ ಬಸವರಾಜ್ ಕಾಣೆಯಾಗಿದ್ದಾರೆ ಎಂದು ಸ್ಥಳೀಯರ ಮಾತಾಗಿದ್ದು. ಜುಲೈ 20ರಂದು ಧರ್ಮಸ್ಥಳದ ನೇತ್ರಾವತಿ ಸೇತುವೆಯ ಕೆಳಭಾಗದ ಹಳೆಯ ರಸ್ತೆಯಲ್ಲಿ ಬಸವರಾಜ್ ಅವರ ಶವ ಪತ್ತೆಯಾಗಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯಿಂದ ಆತ್ಮ ತ್ಯೆಯ ಶಂಕೆ ವ್ಯಕ್ತವಾಗಿದ್ದು, ಬಸವರಾಜ್ ನದಿಯಲ್ಲಿ ಸ್ನಾನಕ್ಕೆ ತೆರಳಿದ ವೇಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರಬಹುದು ಅಧಿಕಾರಿಗಳು ಶಂಕಿಸಿದ್ದಾರೆ .
ಧರ್ಮಸ್ಥದಲ್ಲಿ ಶವವಾಗಿ ಪತ್ತೇಯಾದ ಕೊಪ್ಪಳದ ಶಿಕ್ಷಕ

