Breaking
Wed. Jun 24th, 2026

ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ವಿಧಾನಸೌಧ ಮುಂಭಾಗದಲ್ಲೇ ಆಚರಿಸಲು : ಡಾ. ಎಸ್. ಸಂಗಮೇಶ್ ಒತ್ತಾಯ

ಬೆಂಗಳೂರು : ಜೂನ್ 27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ರಾಜ್ಯ ಸರ್ಕಾರ ವಿಧಾನಸೌಧ ಮುಂಭಾಗದಲ್ಲೇ ವಿಜೃಂಭಣೆಯಿಂದ ಆಚರಿಸಬೇಕು ಎಂದು ಕರ್ನಾಟಕ ರಾಜ್ಯ ಯುವ ಸಮೂಹದ ರಾಜ್ಯಾಧ್ಯಕ್ಷರಾದ ಡಾ. ಎಸ್. ಸಂಗಮೇಶ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬೆಂಗಳೂರು ನಗರ ನಿರ್ಮಾತೃ, ದೂರದೃಷ್ಟಿಯ ಆಡಳಿತಗಾರ ಹಾಗೂ ಕನ್ನಡ ನಾಡಿನ ಹೆಮ್ಮೆಯ ಪ್ರತೀಕವಾಗಿರುವ ನಾಡಪ್ರಭು ಕೆಂಪೇಗೌಡರ ಕೊಡುಗೆಗಳನ್ನು ಮುಂದಿನ ಯುವ ಪೀಳಿಗೆಗೆ ಪರಿಚಯಿಸುವುದು ಸರ್ಕಾರದ ಕರ್ತವ್ಯವಾಗಿದೆ. ಅವರ ಆದರ್ಶಗಳು, ಆಡಳಿತ ದಕ್ಷತೆ ಹಾಗೂ ಅಭಿವೃದ್ಧಿ ಪರಿಕಲ್ಪನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಅವರ ಸ್ಮರಣಾರ್ಥ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಸರ್ಕಾರವು ಆಯೋಜಿಸಲು ಮುಂದಾಗಿದ್ದು ಈ ಕಾರ್ಯಕ್ರಮವನ್ನು ಬೇರೆಲ್ಲೋ ವೇದಿಕೆ ಸಿದ್ಧಪಡಿಸಿ ನೆಪಮಾತ್ರಕ್ಕೆ ಆಚರಿಸಿದೆ, ಈ ಹೆಮ್ಮೆಯ ಸಂಭ್ರಮವನ್ನು ವಿಧಾನಸೌಧ ಮುಂಭಾಗದಲ್ಲಿ ಆಯೋಜಿಸಬೇಕು ಎಂದು ಮನವಿ ಮಾಡಿದ್ದಾರೆ.
ನಾಡಪ್ರಭು ಕೆಂಪೇಗೌಡರ ಆದರ್ಶಗಳನ್ನು ಯುವಜನರಲ್ಲಿ ಬಿತ್ತರಿಸುವ ಉದ್ದೇಶದಿಂದ ರಾಜ್ಯಾದ್ಯಂತ ಜಾಗೃತಿ ಕಾರ್ಯಕ್ರಮಗಳು, ವಿಚಾರ ಸಂಕಿರಣಗಳು ಹಾಗೂ ಯುವ ಸಮಾವೇಶಗಳನ್ನು ಆಯೋಜಿಸಲು ಸರ್ಕಾರ ಮುಂದಾಗಬೇಕು. ಕೆಂಪೇಗೌಡರ ಆಡಳಿತ ನೀತಿಗಳು, ದೂರದೃಷ್ಟಿ ಮತ್ತು ಅಭಿವೃದ್ಧಿ ಚಿಂತನೆಗಳು ಇಂದಿನ ಆಡಳಿತ ವ್ಯವಸ್ಥೆಗೆ ಮಾದರಿಯಾಗಿವೆ ಎಂದು ಅವರು ತಮ್ಮ ಒತ್ತಾಯದ ಮೂಲಕ ಸರ್ಕಾರಕ್ಕೆ ತಿಳಿಸಿದ್ದಾರೆ.

Related Post

Leave a Reply

Your email address will not be published. Required fields are marked *