Site icon NBTV Kannada

ಮೊಳಕಾಲ್ಮೂರು ಕ್ಷೇತ್ರದಲ್ಲಿ12.73 ಕೋಟಿ ರೂ ಅಭಿವೃದ್ಧಿಕಾಮಗಾರಿಗಳಿಗೆ; ಶಾಸಕ ಎನ್.ವೈ. ಗೋಪಾಲಕೃಷ್ಣ ಚಾಲನೆ

ಮೊಳಕಾಲ್ಮೂರು (ಅ.14): ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರ ನೇತೃತ್ವದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಭೂಮಿಪೂಜೆ ಹಾಗೂ ಉದ್ಘಾಟನೆ ನೆರವೇರಿಸಿದಾರು.

ಕ್ಷೇತ್ರದ ರಸ್ತೆ, ಆರೋಗ್ಯ, ಶಿಕ್ಷಣ, ಕುಡಿಯುವ ನೀರು, ನೀರಾವರಿ ಹಾಗೂ ಸಾಮಾಜಿಕ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು, ಒಟ್ಟು ₹12.73 ಕೋಟಿ ಮೌಲ್ಯದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇದರಲ್ಲಿ ₹11.50 ಕೋಟಿ ಮೊತ್ತದ ಶಂಕುಸ್ಥಾಪನೆ ಕಾಮಗಾರಿಗಳು ಹಾಗೂ ₹1.23 ಕೋಟಿ ಮೊತ್ತದ ಭೂಮಿಪೂಜೆ ಕಾಮಗಾರಿಗಳು ಸೇರಿವೆ.

ರಾಂಪುರ ಗ್ರಾಮದ ಮುಖ್ಯ ರಸ್ತೆ ಅಭಿವೃದ್ಧಿಗೆ ₹2 ಕೋಟಿ, ರಾಂಪುರ ಸಮುದಾಯ ಆರೋಗ್ಯ ಕೇಂದ್ರದ ನರ್ಸ್ ಹಾಗೂ ವೈದ್ಯಾಧಿಕಾರಿ ವಸತಿಗೃಹ ನಿರ್ಮಾಣಕ್ಕೆ ತಲಾ ₹50 ಲಕ್ಷ, ಆರೋಗ್ಯ ಕೇಂದ್ರದ ಸಿಸಿ ರಸ್ತೆ, ಚರಂಡಿ ಹಾಗೂ ಕಾಂಪೌಂಡ್ ನಿರ್ಮಾಣಕ್ಕೆ ₹10 ಲಕ್ಷ ಮಂಜೂರಾಗಿದೆ.

ರಾಂಪುರ GMSR ಶಾಲೆಯಲ್ಲಿ ₹23 ಲಕ್ಷ ವೆಚ್ಚದಲ್ಲಿ ಹೈಟೆಕ್ ಗ್ರಂಥಾಲಯ ಕೊಠಡಿ ಹಾಗೂ ₹24 ಲಕ್ಷದಲ್ಲಿ ಭೋಜನಾಲಯ ಮತ್ತು ಶೌಚಾಲಯ ನಿರ್ಮಾಣವಾಗಲಿದೆ. ಬೊಮ್ಮದೇವರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿ ನಿರ್ಮಾಣಕ್ಕೆ ₹14.50 ಲಕ್ಷ ಹಾಗೂ ವಾಲ್ಮೀಕಿ ಭವನಕ್ಕೆ ₹40 ಲಕ್ಷ ವೆಚ್ಚ ಮಾಡಲಾಗುತ್ತಿದೆ.

ಸಿದ್ದಾಪುರ ಗ್ರಾಮದ ಸಮೀಪ ₹3.75 ಕೋಟಿ ವೆಚ್ಚದಲ್ಲಿ ಚೆಕ್‌ಡ್ಯಾಂ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಇದರಿಂದ ಸ್ಥಳೀಯ ರೈತರಿಗೆ ನೀರಾವರಿ ಹಾಗೂ ಅಂತರ್ಜಲಮಟ್ಟ ಸುಧಾರಣೆಗೆ ಅನುಕೂಲವಾಗುವ ನಿರೀಕ್ಷೆಯಿದು.

ನಾಗಸಮುದ್ರ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ವಸತಿಗೃಹ ನಿರ್ಮಾಣಕ್ಕೆ ₹50 ಲಕ್ಷ ಹಾಗೂ ಆರೋಗ್ಯ ಕೇಂದ್ರದ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ₹25 ಲಕ್ಷ ಒದಗಿಸಲಾಗಿದು.ಮೊಳಕಾಲ್ಮೂರು ಪಟ್ಟಣದಲ್ಲಿ ₹4 ಕೋಟಿ ವೆಚ್ಚದಲ್ಲಿ ನೂತನ ಅಂಬೇಡ್ಕರ್ ಭವನ ನಿರ್ಮಾಣಕ್ಕೂ ಚಾಲನೆ ನೀಡದರೆ.

ಈ ಕಾಮಗಾರಿಗಳ ಪೂರ್ಣಗೊಂಡ ಬಳಿಕ ಕ್ಷೇತ್ರದ ಗ್ರಾಮೀಣ ರಸ್ತೆ ಸಂಪರ್ಕ, ಆರೋಗ್ಯ ಸೇವೆ, ಶೈಕ್ಷಣಿಕ ಸೌಲಭ್ಯ, ನೀರಾವರಿ ವ್ಯವಸ್ಥೆ ಹಾಗೂ ಸಾಮಾಜಿಕ ಮೂಲಸೌಕರ್ಯಗಳು ಮತ್ತಷ್ಟು ಬಲಪಡಲಿವೆ ಎಂದು ನಿರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಭಿವೃದ್ಧಿಯೇ ಗುರಿ, ಜನಸೇವೆಯೇ ಧ್ಯೇಯ ಎಂಬ ಆಶಯದೊಂದಿಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ತಿಳಿಸಿದ್ದಾರೆ.

Exit mobile version