Site icon NBTV Kannada

ಸೋಲಾರ್ ಕೃಷಿ ಪಂಪ್ಸೆಟ್ ಅಳವಡಿಸಕೆಗೆ ಸರ್ಕಾರ ಶೇ.50ರಷ್ಟು ಸಬ್ಸಿಡಿ ಘೋಷಣೆ

ಬೆಂಗಳೂರು. 22: ಮಂಗಳವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ರೈತರಿಗೆ ಸಂತಸದ ವಿಷಯವನ್ನು ನೀಡಿದ ರಾಜ್ಯ ಸರ್ಕಾರ ಕೃಷಿಯಲ್ಲಿನ ಪ್ರಗತಿ ಸಾಧಿಸುವ ಸಲುವಾಗಿ ಚರ್ಚೆ ನಡೆಸಿ ರೈತರಿಗೆ ಅನುಕೂಲವಾಗುವಂತ ಸೌಲಭ್ಯಗಳನ್ನು ಈ ಕೆಳಕಂಡಂತೆ ಘೋಷಣೆ .• ಕುಸುಮ್ ಬಿ ಯೋಜನೆಯಡಿ ಸೋಲಾರ್ ಕೃಷಿ ಪಂಪ್ಸೆಟ್ ಅಳವಡಿಸಲು, ಕೇಂದ್ರ ಸರ್ಕಾರ ಶೇ.30, ರಾಜ್ಯ ಸರ್ಕಾರ ಶೇ.50ರಷ್ಟು ಸಬ್ಸಿಡಿ ಒದಗಿಸುತ್ತಿದ್ದು, ಫಲಾನುಭವಿಗಳು ಶೇ.20ರಷ್ಟು ಭರಿಸಬೇಕಿದೆ. • ಈ ಯೋಜನೆಯಡಿ 40 ಸಾವಿರ ಪಂಪ್ ಸೆಟ್ ಗಳಿಗೆ ಅನುಮೋದನೆ ನೀಡಲಾಗಿದ್ದು, ಇದನ್ನು ಅನುಷ್ಠಾನಗೊಳಿಸುವ ಬಗ್ಗೆ ಸರ್ಕಾರ ಶೀಘ್ರ ಕ್ರಮ ಕೈಗೊಂಡಿದೆ.• 25ಸಾವಿರ ರೈತರು ಹೆಚ್ಚುವರಿಯಾಗಿ ಕುಸುಮ್ ಬಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದು. ಯೋಜನೆಯಡಿ ರಾಜ್ಯ ಸರ್ಕಾರ 752 ಕೋಟಿ ರೂ. ವೆಚ್ಚ ಮಾಡಿ ಈ ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿದ ಬಳಿಕ ಸಬ್ಸಿಡಿ ಮೊತ್ತ ಕಡಿಮೆಮಾಡಲಾಗುವುದು.• ರೈತರಿಗೆ ಸ್ವಯಂ ವಿದ್ಯುತ್ ಮೂಲಸೌಕರ್ಯ ಅವಕಾಶ ಕಲ್ಪಿಸಲಾಗುತ್ತಿದ್ದು, ಟ್ರಾನ್ಸ್ ಫಾರ್ಮರ್ ಗಳನ್ನು ಇಲಾಖೆಯಿಂದ ಒದಗಿಸಲಾಗುವುದು. • ನೀರಾವರಿ ಪಂಪ್ ಸೆಟ್ ಗಳಿಗೆ 2024-25ರ ಸಾಲಿನಲ್ಲಿ 12,785 ಕೋಟಿ ರೂಪಾಯಿಗಳ ಅನುದಾನ ಹಂಚಿಕೆ ಆಗಿದ್ದು, ಫೆಬ್ರವರಿ 2025 ವರೆಗೆ ರೂ. 11,720 ಕೋಟಿ ಬಿಡುಗಡೆ ಆಗಿದೆ. 2025-26ರಲ್ಲಿ 16,021 ಕೋಟಿ ರೂಪಾಯಿಗಳ ಆಯವ್ಯಯ ಹಂಚಿಕೆಯಾಗಿದೆ.ಎಂದು ಮುಖ್ಯಮಂತ್ರಿಗಳು ಮಾಧ್ಯಮಗಳಿಗೆ ತಿಳಿಸಿದ್ದು.ಈ ಸಭೆಯಲ್ಲಿ ಇಂಧನ ಸಚಿವ ಕೆ ಜೆ ಜಾರ್ಜ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Exit mobile version