Breaking
Sat. Oct 3rd, 2026

ಗಾಂಧೀಜಿ ತತ್ವಗಳಾದ ಸತ್ಯ ಮತ್ತು ಅಹಿಂಸೆ ಪ್ರತಿಯೊಬ್ಬರ ಜೀವನಕ್ಕೆ ದಾರಿದೀಪ: ಸುಧಕರ್

{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"transform":1,"remove":1},"is_sticker":false,"edited_since_last_sticker_save":true,"containsFTESticker":false}

ಪಾವಗಡ: ತಾಲೂಕಿನ ಕೊಡಮಡಗು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಮಹಾತ್ಮಾ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ಜೀವನಾದರ್ಶಗಳು ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸುಧಕರ್, ಗಾಂಧೀಜಿ ಅವರು ಸತ್ಯ, ಅಹಿಂಸೆ ಹಾಗೂ ಸ್ವಚ್ಛತೆಯ ಮೂಲಕ ಸಮಾಜಕ್ಕೆ ಮಹತ್ವದ ಸಂದೇಶ ನೀಡಿದ್ದು, ಅವರ ಆದರ್ಶಗಳು ಇಂದಿಗೂ ಪ್ರತಿಯೊಬ್ಬರಿಗೂ ದಾರಿದೀಪವಾಗಿವೆ ಎಂದು ಹೇಳಿದರು.

ಸ್ವಚ್ಛತೆ, ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕ ಸೇವೆಯಲ್ಲಿ ಪ್ರಾಮಾಣಿಕತೆಯನ್ನು ಅಳವಡಿಸಿಕೊಳ್ಳುವುದು ಗಾಂಧೀಜಿ ಅವರಿಗೆ ಸಲ್ಲಿಸುವ ನಿಜವಾದ ಗೌರವವಾಗಿದೆ. ಗಾಂಧೀಜಿ ಅವರ ತತ್ವಗಳು ಕೇವಲ ಜಯಂತಿ ಆಚರಣೆಗೆ ಸೀಮಿತವಾಗದೆ, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಪಾಲಿಸುವ ಮೂಲಕ ಸಮಾಜದಲ್ಲಿ ಉತ್ತಮ ಬದಲಾವಣೆ ತರಬೇಕು ಎಂದು ಕರೆ ನೀಡಿದರು.

ಗ್ರಾಮಗಳ ಸ್ವಚ್ಛತೆ ಮತ್ತು ಸಾರ್ವಜನಿಕ ಸೇವಾ ಕಾರ್ಯಗಳಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಪಾಲ್ಗೊಳ್ಳಬೇಕು. ಗಾಂಧೀಜಿ ಪ್ರತಿಪಾದಿಸಿದ ಸತ್ಯ ಮತ್ತು ಅಹಿಂಸೆಯ ಮಾರ್ಗವನ್ನು ಅನುಸರಿಸುವ ಮೂಲಕ ಶಾಂತಿಯುತ ಹಾಗೂ ಸ್ವಚ್ಛ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಂಚಾಯಿತಿ ಸಿಬ್ಬಂದಿಗಳಾದ ಕಾರ್ಯದರ್ಶಿ ಸುಧಕರ್, ಆಪರೇಟರ್ ಜಯಪ್ರಕಾಶ್, ಅಟೆಂಡರ್ ರಾಮಾಂಜಿ, ವಾಟರ್‌ಮ್ಯಾನ್ ಹನುಮಂತ ಸೇರಿದಂತೆ ವಿವಿಧ ಗ್ರಾಮಗಳ ವಾಟರ್‌ಮ್ಯಾನ್‌ಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Related Post

Leave a Reply

Your email address will not be published. Required fields are marked *