Breaking
Sun. Oct 18th, 2026

ನೇರಳೆಕುಂಟೆ ಗೋಮಾಳ ಜಮೀನು ಉಳಿಸಲು ರೈತರ ಆಗ್ರಹ: ಜಿಲ್ಲಾಧಿಕಾರಿ ಕಚೇರಿಗೆ ಮನವಿ

{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"transform":1,"remove":1},"is_sticker":false,"edited_since_last_sticker_save":true,"containsFTESticker":false}

ತುಮಕೂರು(ಅ.16): ಪಾವಗಡ ತಾಲ್ಲೂಕಿನ ನೇರಳೆಕುಂಟೆ ಗ್ರಾಮದ ಸರ್ವೆ ನಂ. 77ರಲ್ಲಿರುವ ಸುಮಾರು 37 ಎಕರೆ 36 ಗುಂಟೆ ಗೋಮಾಳ ಜಮೀನನ್ನು ಸಂರಕ್ಷಿಸುವಂತೆ ಆಗ್ರಹಿಸಿ ರೈತರು ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ, ಸಂಬಂಧಪಟ್ಟ ಸಹಾಯಕ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.

ಗ್ರಾಮದ ಜಾನುವಾರುಗಳ ಮೇವು, ನೀರು ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಈ ಗೋಮಾಳ ಜಮೀನನ್ನು ಸಂರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆದ್ದರಿಂದ, ಜಮೀನಿನ ಹಳೆಯ ಸರ್ಕಾರಿ ದಾಖಲೆಗಳನ್ನು ಪರಿಶೀಲಿಸಿ, ವಾಸ್ತವ ಸ್ಥಿತಿಯನ್ನು ಸ್ಪಷ್ಟಪಡಿಸುವುದರ ಜತೆಗೆ ಸರ್ಕಾರಿ ಆಸ್ತಿಯನ್ನು ಉಳಿಸಲು ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದರು.

ಹಳೆಯ ದಾಖಲೆಗಳ ಪರಿಶೀಲನೆಗೆ ಆಗ್ರಹ

ನೇರಳೆಕುಂಟೆ ಗ್ರಾಮದ ಗೋಮಾಳ ಜಮೀನಿನ ಸಂರಕ್ಷಣೆಗೆ ಸಂಬಂಧಿಸಿದಂತೆ ಸರ್ಕಾರ ತಕ್ಷಣ ಗಮನಹರಿಸಬೇಕು. ಜಮೀನಿನ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ಅದರ ಸ್ವರೂಪ ಮತ್ತು ಹಕ್ಕುಗಳ ಕುರಿತು ಸ್ಪಷ್ಟತೆ ನೀಡಬೇಕು. ಅಲ್ಲದೆ, ವಿವಾದಿತ ಜಮೀನಿನಲ್ಲಿ ಯಾವುದೇ ಕಾಮಗಾರಿ ನಡೆಯದಂತೆ ಸೂಕ್ತ ಕಾನೂನುಬದ್ಧ ರಕ್ಷಣಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.

ಗೋಮಾಳದ ಹಕ್ಕಿಗಾಗಿ ಹೋರಾಟ ನಡೆಸುತ್ತಿರುವ ಗ್ರಾಮಸ್ಥರ ವಿರುದ್ಧ ಸುಳ್ಳು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದು, ಈ ಪ್ರಕರಣಗಳನ್ನು ಕಾನೂನುಬದ್ಧವಾಗಿ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಹೋರಾಟಕ್ಕೆ ಮಾರಣ್ಣ ಪಾಳೇಗಾರ ಬೆಂಬಲ ನೀಡಿದ್ದು ಗ್ರಾಮದ ಅನೇಕ ರೈತರು ಹೋರಾಟಕ್ಕೆ ಭಾಗಿಯಾಗಿ ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸಿದರು.

Related Post

Leave a Reply

Your email address will not be published. Required fields are marked *