ಬೆಂಗಳೂರು, ಸೆ. 1: ನಗರದ ಶೇಷಾದ್ರಿಪುರಂನಲ್ಲಿ ಸಂಘಟನೆಯ ಸಂಸ್ಥಾಪಕ ಶ್ರೀಶೈಲು ಎಂ.ಜಿ. ಅವರ ಸಾನಿಧ್ಯದಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳು ಮತ್ತು ಮುಖಂಡರ ಸಮ್ಮುಖದಲ್ಲಿ ಕನ್ನಡ ರಕ್ಷಣಾ ವೇದಿಕೆಯ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಸಾಕೇ ನಾರಾಯಣ ಅವರನ್ನು ಆಯ್ಕೆ ಮಾಡಲಾಗಿದ್ದು.
ನೂತನ ರಾಜ್ಯಾಧ್ಯಕ್ಷರಿಗೆ ಆಯ್ಕೆ ಪ್ರಮಾಣಪತ್ರ ವಿತರಿಸಿ, ಕರ್ನಾಟಕದಾದ್ಯಂತ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ . ಕನ್ನಡ ಭಾಷೆ, ನೆಲ, ಜಲ ಹಾಗೂ ಸಂಸ್ಕೃತಿಯ ರಕ್ಷಣೆಯ ಉದ್ದೇಶದಿಂದ ರಾಜ್ಯದ ವಿವಿಧೆಡೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಲಾಯಿತು. ಸಂವಿಧಾನದ ಆಶಯ ಮತ್ತು ಕಾನೂನಿನ ಚೌಕಟ್ಟಿನೊಳಗೆ ಕಾರ್ಯ ನಿರ್ವಹಿಸಿ, ಕನ್ನಡಿಗರ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡುವಂತೆ ಜವಾಬ್ದಾರಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ರಾಜು ಗೋಪಾಲ್, ರಾಜ್ಯ ಉಪಾಧ್ಯಕ್ಷರಾದ ನಂಜಪ್ಪ ಜೆ. ಮತ್ತು ಪ್ರವೀಣ್ ಕುಮಾರ್, ರಾಜ್ಯ ಕಾರ್ಯಾಧ್ಯಕ್ಷ ರಂಗಪ್ಪ ಎನ್.ಎಸ್., ರಾಜ್ಯ ಕಾರ್ಯದರ್ಶಿ ರಂಗಸ್ವಾಮಿ ಪಾವಗಡ, ರಾಜ್ಯ ಜಂಟಿ ಕಾರ್ಯದರ್ಶಿ ಪುಷ್ಪನಾಥ, ರಾಜ್ಯ ಖಜಾಂಚಿ ಸಾಕೇ ಆಂಜನೇಯಲು, ಬೆಂಗಳೂರು ನಗರ ಪ್ರಧಾನ ಕಾರ್ಯದರ್ಶಿ ವೆಂಕಟರಮಣ, ಯುವ ಘಟಕದ ಉಪಾಧ್ಯಕ್ಷ ವಿಕಾಸ್ ನಾರಾಯಣ ಸೇರಿದಂತೆ ಹಲವು ಪದಾಧಿಕಾರಿಗಳು, ಮುಖಂಡರು ಮತ್ತು ಗಣ್ಯರು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದಾಧಿಕಾರಿಗಳು ನೂತನ ರಾಜ್ಯಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿ, ಕನ್ನಡ ಪರ ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಶುಭ ಹಾರೈಸಿದರು.

